Arise! Awake! and stop not until the goal is reached.
ದಿನಾಂಕ 5/3/2023ರಂದು ನಮ್ಮ ವಿವೇಕಾನಂದ ವಸತಿ ನಿಲಯಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ -ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿಸರ್ಗ ಸಿ.ಎಸ್ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಹಾಗೂ ವಸತಿ ನಿಲಯಗಳ ಮುಖ್ಯ ನಿಲಯ ಪಾಲಕರಾದ ಚೇತನ್ ಮತ್ತು ವಸತಿ ನಿಲಯಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ ಪ್ರಭು, ಕಾರ್ಯದರ್ಶಿಗಳಾದ ಶಿವಕುಮಾರ್, ಸದಸ್ಯರಾದ ಶೈಲಾ ರಾಜೇಶ್ ಹಾಗೂ ಶ್ರೀ ಕೃಷ್ಣ ಭಟ್ ಇವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ತಮ್ಮ ಮುಂದಿನ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕೆಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಸತಿ ನಿಲಯಗಳ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.ನಂತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕೆಲವು ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ನಂತರ ಸಿಹಿ ಊಟದೊಂದಿಗೆ ಈ ಬೀಳ್ಕೊಡುಗೆ ಕಾರ್ಯಕ್ರಮವು ಕೊನೆಗೊಂಡಿತು.